Advertisement
ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು.ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ.
1971ರ ಇಂಡೋ ಪಾಕ್‍ಯುದ್ಧದಲ್ಲಿ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿಇದು ಬಳಕೆಯಾಗಿದೆ. 40 ಟನ್‍ಗಳಷ್ಟು ತೂಕ ಹೊಂದಿರುವ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲ ಹೊಂದಿದೆ. ಗಂಟೆಗೆ 51 ಕಿ.ಮೀ. ಸಾಮರ್ಥ್ಯ 500 ಅಶ್ವಶಕ್ತಿ ಹೊಂದಿತ್ತು. 1968ರಲ್ಲಿ ಭಾರತೀಯ ಸೇನೆಗೆ ಇದನ್ನು ಸೇರಿಸಲಾಯಿತು. ಸೋವಿಯತ್ ಒಕ್ಕೂಟ ಸಿಬ್ಬಂದಿ ಇದನ್ನು ತಯಾರು ಮಾಡಿದ್ದರು.Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ

ಮಿರರ್ ಡೆಸ್ಕ್ – ಮಿರರ್ ನ್ಯೂಸ್ ನೆಟ್ವರ್ಕ್
Be the first to comment on "ಧರ್ಮಸ್ಥಳ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಟ್ಯಾಂಕ್ ಕೊಡುಗೆ"