ಬಾಲರಾಮನ ಮೂರು ಮೂರ್ತಿಗಳಿಗೂ ಮಂದಿರದೊಳಗೆ ಪ್ರತಿಷ್ಠಾಪನೆ ಭಾಗ್ಯ…? | ಮೂರೂ ಮೂರ್ತಿಗಳಿಗೂ ಪೂಜೆ, ಆರಾಧನೆಯ ಚಿಂತನೆ |

January 26, 2024
5:25 PM

ಅಯೋಧ್ಯೆ ರಾಮ ಮಂದಿರ(Ayodhya Ram Mandir) ಪೂರ್ಣಗೊಂಡು ರಾಮನ ಮೂರ್ತಿ ಪ್ರತಿಷ್ಠಾಪನೆಗೆ ಮುನ್ನ ರಾಮನ ಪ್ರತಿಮೆಯನ್ನು ಕೆತ್ತುವ ಕೆಲಸದ್ದೇ ಸುದ್ದಿ. ದೇಶದಾದ್ಯಂತ ಮೂವರನ್ನು ಆಯ್ಕೆ ಮಾಡಲಾಗಿತ್ತು. ಮೂವರು ರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ್ದರು. ಆದರೆ ಪ್ರಾಣಪತಿಷ್ಠಾಪನೆ ಭಾಗ್ಯ ಒದಗಿ ಬಂದಿದ್ದು ಮೈಸೂರಿನ ಅರುಣ್‌ ಯೋಗಿರಾಜ್‌(Arun Yogiraj ಅವರು ಕೆತ್ತಿದ ಅಂದದ ಮೂರ್ತಿಗೆ.

ಉತ್ತರ ಕನ್ನಡ ಜಿಲ್ಲೆಯ ಶಿಲ್ಪಿ ಗಣೇಶ್ ಭಟ್ ಮತ್ತು ರಾಜಸ್ಥಾನದ ಶಿಲ್ಪಿ ಸತ್ಯ ನಾರಾಯಣ ಪಾಂಡೆ ಕೆತ್ತಿದ ಬಾಲರಾಮನ ಮೂರ್ತಿಗಳನ್ನು ಏನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿದೆ. ಈ ಎರಡು ಮೂರ್ತಿಗಳ ಬಗ್ಗೆ ಟ್ರಸ್ಟ್ ಶೀಘ್ರ ತೀರ್ಮಾನ ತೆಗೆದುಗೊಳ್ಳಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ರಾಮಮಂದಿರದ ಮೊದಲ ಮತ್ತು ಎರಡನೇ ಮಹಡಿಯಲ್ಲಿ ನಿರ್ಮಾಣವಾಗಲಿರುವ ಗುಡಿಯಲ್ಲಿ ಎರಡು ಮೂರ್ತಿಗಳನ್ನು ಇರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮೂಲಕ ಮೂರು ಮೂರ್ತಿಗಳಿಗೂ ಅಯೋಧ್ಯೆ ರಾಮಮಂದಿರದಲ್ಲಿ ಪೂಜೆ, ಆರಾಧನೆ ನಡೆಯಲಿದೆ. ಭಕ್ತರಿಗೆ ದರ್ಶನ ಮಾಡುವ ಅವಕಾಶ ಸಿಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಜ.22 ರಂದು ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಜರುಗಿತು.

Source : ಅಂತರ್ಜಾಲ ಮಾಹಿತಿ

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?
January 11, 2026
2:11 PM
by: ಸಾಯಿಶೇಖರ್ ಕರಿಕಳ
ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror