ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಇದರ ಆರ್ಭಟಕ್ಕೆ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಹೊಡೆತಕ್ಕೆ ಕೆಲವು ಗ್ರಾಮಗಳು ನೆರೆಯ ಹೊಡೆತಕ್ಕೆ ನಲುಗಿವೆ. ಇನ್ನು ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿರುವ ಅತ್ತಿಗುಂಡಿ ಕುಗ್ರಾಮ ಕಳೆದ 45 ದಿನಗಳಿಂದ ಕರೆಂಟ್ ಇಲ್ಲದೆ ಕತ್ತಲಲ್ಲಿ ಬದುಕುವಂತಾಗಿದೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಇರುವ ಈ ಕುಗ್ರಾಮದ ಸುತ್ತಮುತ್ತ ಕಳೆದ ಒಂದೂವರೆ ತಿಂಗಳಿನಿಂದಲೂ ಧಾರಾಕಾರ ಮಳೆ ಸುರಿಯುತ್ತಿದೆ.
ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಎಂಬ ಖ್ಯಾತಿಗೆ ಪಾತ್ರವಾಗಿರುವ ಮುಳ್ಳಯ್ಯನಗಿರಿಯ ಮಳೆಗೆ ಮಲೆನಾಡು ಅಕ್ಷರಶಃ ಕಂಗಾಲಾಗಿದೆ. ಅತ್ತಿಗುಂಡಿ ಮಾರ್ಗದಲ್ಲಿ ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಭಾರೀ ಮಳೆ ಗಾಳಿಯಿಂದ ಮುರಿದುಬಿದ್ದ ವಿದ್ಯುತ್ ತಂತಿ ಹಾಗೂ ಕಂಬಗಳನ್ನ ದುರಸ್ತಿ ಮಾಡುವುದು ಅಸಾಧ್ಯವಾಗಿದೆ. ಜೊತೆಗೆ ಮೇಲಿಂದ ಮೇಲೆ ವಿದ್ಯುತ್ ತಂತಿಗಳು ಹಾಗೂ ಕಂಬಗಳು ಮುರಿದು ಬಿದ್ದ ಪರಿಣಾಮ ಮೆಸ್ಕಾಂ ಸಿಬ್ಬಂದಿಗೆ ಲೈನ್ ದುರಸ್ತಿ ಮಾಡುವುದು ಕೂಡ ಅಸಾಧ್ಯವಾಗಿದೆ. ಹಾಗಾಗಿ, ಕಳೆದ ಒಂದೂವರೆ ತಿಂಗಳಿಂದಲೂ ಕೂಡ ಈ ಗ್ರಾಮ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಮೊಬೈಲ್ ಚಾರ್ಜ್ ಕೂಡ ಮಾಡಿಕೊಳ್ಳಲಾಗಿದೆ ಗ್ರಾಮಸ್ಥರು ಮೊಬೈಲ್‌ಗಳನ್ನ ಮೂಲೆಗೆ ಎಸೆದಿದ್ದಾರೆ ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…