26.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಮಳೆ ಬಿಡುವಿನ ಅವಧಿ ಹೆಚ್ಚಿದಂತೆ ಗಾಳಿಯ ವೇಗವೂ ಹೆಚ್ಚಿರಬಹುದು. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 28ರ ತನಕ ಉತ್ತಮ ಮಳೆ ಮುಂದುವರಿಯುವ ಲಕ್ಷಣಗಳಿವೆ. 29 ರಿಂದ ಕಡಿಮೆಯಾದರೂ ಜುಲೈ 4 ರಿಂದ ಮತ್ತೆ ಹೆಚ್ಚಳವಾಗುವ ಸೂಚನೆಗಳಿವೆ.
ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಜೂನ್ 29ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ಜುಲೈ 4ರಿಂದ ಉತ್ತಮ ಮುಂಗಾರು ಮಳೆಯ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಹಾಗೂ ಬಾಗಲಕೋಟೆ, ಗದಗ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿತ್ರದುರ್ಗ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 28 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾದರೂ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಜುಲೈ 4 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.