ಹವಾಮಾನ ವರದಿ | 27-10-2024 | ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ | ಇನ್ನೂ ಒಂದು ವಾರ ಮಳೆ ಸಾಧ್ಯತೆ |

October 27, 2024
11:58 AM
ನವೆಂಬರ್ 2 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.

28.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಮೋಡ ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ, ಮಂಗಳೂರು ಹಾಗೂ ಕಾಸರಗೋಡು ತೀರ ಭಾಗಗಳ ಸುತ್ತಮುತ್ತ ತಡ ರಾತ್ರಿ ಅಥವಾ ಮುಂಜಾನೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಈ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ದಿನಕಳೆದಂತೆ ಮಳೆಯ ಪ್ರಮಾಣವೂ ಹೆಚ್ಚಾಗುವ ಸಾಧ್ಯತೆ ಇದೆ.

ಒಳನಾಡು : ಉತ್ತರ ಭಾರತ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಕಾರಣದಿಂದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ ಇರಬಹುದು.

ಉತ್ತರ ಭಾರತ ಕಡೆಯಿಂದ ಈಗ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಮಾಣವು ಕಡಿಮೆಯಾಗುತ್ತಿದ್ದಂತೆಯೆ, ಪೂರ್ವದ ಮಾರುತಗಳು ಚುರುಕಾಗುವ ಸಾಧ್ಯತೆಗಳಿದ್ದು, ನವೆಂಬರ್ 2 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror