28.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಮೋಡ ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ, ಮಂಗಳೂರು ಹಾಗೂ ಕಾಸರಗೋಡು ತೀರ ಭಾಗಗಳ ಸುತ್ತಮುತ್ತ ತಡ ರಾತ್ರಿ ಅಥವಾ ಮುಂಜಾನೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಈ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ದಿನಕಳೆದಂತೆ ಮಳೆಯ ಪ್ರಮಾಣವೂ ಹೆಚ್ಚಾಗುವ ಸಾಧ್ಯತೆ ಇದೆ.
ಒಳನಾಡು : ಉತ್ತರ ಭಾರತ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಕಾರಣದಿಂದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಉತ್ತರ ಭಾರತ ಕಡೆಯಿಂದ ಈಗ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಮಾಣವು ಕಡಿಮೆಯಾಗುತ್ತಿದ್ದಂತೆಯೆ, ಪೂರ್ವದ ಮಾರುತಗಳು ಚುರುಕಾಗುವ ಸಾಧ್ಯತೆಗಳಿದ್ದು, ನವೆಂಬರ್ 2 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…
ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…