ಹವಾಮಾನ ವರದಿ | 13-12-2025 | ತುಂತುರು ಮಳೆಯ ಸಾಧ್ಯತೆ ಇದೆ..! ಕಾರಣ ಏನು..?

December 13, 2025
8:27 PM

14.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :  ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಉತ್ತಮ ಚಳಿ ಹಾಗೂ ಒಣ ಹವೆ ಮುಂದುವರಿಯಲಿದೆ.

ಮಧ್ಯಮ ಸ್ತರದ ಗಾಳಿಯು ಗುಜರಾತ್ ಹಾಗೂ ರಾಜಸ್ಥಾನ ಕೇಂದ್ರಿಕರಿಸಿಕೊಂಡು ಬೃಹತ್ ಗಾತ್ರದಲ್ಲಿ ಅಸ್ವಾಭಾವಿಕ ತಿರುಗುವಿಕೆಯ ಪರಿಣಾಮದಿಂದ ಉತ್ತರ ಭಾರತದ ಕಡೆಯಿಂದ ಶೀತ ಮಾರುತಗಳು ದಕ್ಷಿಣದ ಕಡೆಗೆ ಬಲವಾಗಿ ಬೀಸುತ್ತಿದೆ ಹಾಗೂ ರಾಜ್ಯದ ವಾತಾವರಣದ ಉಷ್ಣಾಂಶ ತೀವ್ರವಾಗಿ ಕುಸಿದಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಈಗಿನಂತೆ ಡಿಸೆಂಬರ್ 15 ರಿಂದ ಈ ತಿರುಗುವಿಕೆಯು ಮತ್ತಷ್ಟು ವಿಸ್ತಾರಗೊಂಡು ಬಂಗಾಳಕೊಲ್ಲಿಯ ತನಕ ತಲಪುವ ನಿರೀಕ್ಷೆಯಿದೆ. ಈ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ಬೀಸಿದರೆ, ವಾತಾವರಣದ ಉಷ್ಣಾಂಶ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿ, ಡಿಸೆಂಬರ್ 15 ರಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಡಿಸೆಂಬರ್ 16 ರಿಂದ 18 ರ ತನಕ ದಕ್ಷಿಣ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror