30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಡಿಸೆಂಬರ್ 30 ರಿಂದ ಚಳಿಯ ಪ್ರಮಾಣವು ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈ ಮೋಡದ ವಾತಾವರಣವು 2026 ಜನವರಿ 4ನೇ ತಾರೀಕಿನ ತನಕ ಮುಂದುವರಿಯುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಡಿಸೆಂಬರ್ 31 ರಂದು ಬಂಗಾಳಕೊಲ್ಲಿಯಲ್ಲಿ ಗಾಳಿಯ ಅಧಿಕ ಒತ್ತಡದ ತಿರುಗುವಿಕೆ ಹಾಗೂ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯ ಪರಿಣಾಮದಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.



