ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ ಮೂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಪತ್ರಕರ್ತರಿಗೆ ಹೃದಯ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಯಾರೂ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಐ.ಸಿ.ಎಂ.ಆರ್. ಸೇರಿದಂತೆ ಅನೇಕ ಸಂಸ್ಥೆಗಳು ಅಧ್ಯಯನ ಕೈಗೊಂಡಿದ್ದು, ಎಲ್ಲಿಯೂ ಕೋವಿಡ್ ಲಸಿಕೆಯಿಂದ ಹೃದಯಾಘಾತದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾರಾದರೂ ಹೃದಯಾಘಾತದಿಂದ ಮೃತಪಟ್ಟಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಇದರಿಂದ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಹೇಳಿದ್ದಾರೆ. ಹಾಸನದಲ್ಲಿ ಹೃದಯಾಘಾತದ ಪ್ರಕರಣ ಹೆಚ್ಚಾಗಿ ಕಂಡುಬಂದ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ರಚಿಸಿದ್ದು, ವರದಿ ಬಂದ ನಂತರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel