153 ಎಕರೆ ವಿಸ್ತೀರ್ಣದಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ | 70ನೇ  ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಅರಣ್ಯ ಸಚಿವ  ಈಶ್ವರ್ ಖಂಡ್ರೆ

October 7, 2024
10:22 PM

ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ “ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅವರು 70ನೇ  ವನ್ಯಜೀವಿ ಸಪ್ತಾಹದ ಸಮಾರೋಪ ಅಂಗವಾಗಿ  ಬೆಂಗಳೂರಿನಲ್ಲಿ  ವಿವಿಧ  ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ  ಪ್ರಶಸ್ತಿ  ಪ್ರದಾನ ಮಾಡಿದರು.ಭಾರತೀಯ ಅರಣ್ಯ ಸಮೀಕ್ಷಾ ವರದಿ  ಪ್ರಕಾರ  ಬೆಂಗಳೂರು ನಗರ ಬಾರತದಲ್ಲೇ  3ನೇ ಅತಿ ಹೆಚ್ಚು  ಭೂ ಪ್ರದೇಶ ಹೊಂದಿರುವ ನಗರವಾಗಿದೆ. ಸುಮಾರು  89 ಚದರ ಕಿಲೋಮೀಟರ್ ನಷ್ಟು ಅರಣ್ಯ ಪ್ರದೇಶ ಹೊಂದಿದೆ. ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರು  ನಗರದಲ್ಲಿ  ಐದು ಚದರ ಕಿಲೋಮೀಟರ್ ನಷ್ಟು ಹಸಿರು ಹೊದಿಕೆ  ಕಡಿಮೆಯಾಗಿದೆ ಎಂದು ಹೇಳಿದರು. ವನ್ಯಮೃಗಗಳ  ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು  ಮತ್ತು ಮುಂದಿನ ಪೀಳಿಗೆಗೆ  ವನ್ಯಮೃಗಗಳ ಮಹತ್ವ  ತಿಳಿಸಲು  ವನ್ಯಜೀವಿ ಸಪ್ತಾಹ  ಆಚರಿಸಲಾಗುತ್ತಿದೆ ಎಂದು ಹೇಳಿದರು.

ಈ ವೇಳೆ   ಅರಣ್ಯ, ಜೀವಿಶಾಸ್ತ್ರ,  ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಪ್ರಧಾನ  ಮುಖ್ಯ  ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಕಾರ್ಯಪಡೆ ಮುಖ್ಯಸ್ಥ  ಬ್ರಿಜೇಶ್ ಕುಮಾರ್ ದೀಕ್ಷಿತ್ , ಮುಖ್ಯ ವನ್ಯಜೀವಿ ಪರಿಪಾಲಕ  ಸುಭಾಷ್  ಮಾಲ್ಪಡೆ  ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್
ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror