ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ “ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಅವರು 70ನೇ ವನ್ಯಜೀವಿ ಸಪ್ತಾಹದ ಸಮಾರೋಪ ಅಂಗವಾಗಿ ಬೆಂಗಳೂರಿನಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.ಭಾರತೀಯ ಅರಣ್ಯ ಸಮೀಕ್ಷಾ ವರದಿ ಪ್ರಕಾರ ಬೆಂಗಳೂರು ನಗರ ಬಾರತದಲ್ಲೇ 3ನೇ ಅತಿ ಹೆಚ್ಚು ಭೂ ಪ್ರದೇಶ ಹೊಂದಿರುವ ನಗರವಾಗಿದೆ. ಸುಮಾರು 89 ಚದರ ಕಿಲೋಮೀಟರ್ ನಷ್ಟು ಅರಣ್ಯ ಪ್ರದೇಶ ಹೊಂದಿದೆ. ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿ ಐದು ಚದರ ಕಿಲೋಮೀಟರ್ ನಷ್ಟು ಹಸಿರು ಹೊದಿಕೆ ಕಡಿಮೆಯಾಗಿದೆ ಎಂದು ಹೇಳಿದರು. ವನ್ಯಮೃಗಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮುಂದಿನ ಪೀಳಿಗೆಗೆ ವನ್ಯಮೃಗಗಳ ಮಹತ್ವ ತಿಳಿಸಲು ವನ್ಯಜೀವಿ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ಅರಣ್ಯ, ಜೀವಿಶಾಸ್ತ್ರ, ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಕಾರ್ಯಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್ , ಮುಖ್ಯ ವನ್ಯಜೀವಿ ಪರಿಪಾಲಕ ಸುಭಾಷ್ ಮಾಲ್ಪಡೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…