ಪರಿಸರ ಸಂರಕ್ಷಣೆಗೆ ಕಾಯಿದೆ ತಿದ್ದುಪಡಿಗೆ ಚಿಂತನೆ | ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ..! | ಅರಣ್ಯ ಸಚಿವರು

June 7, 2024
1:20 PM
ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಮರಗಳನ್ನು ಕಡಿಯುವ ಮರಗಳ್ಳರ(wood thief)ವಿರುದ್ಧ ಕಠಿಣ ರೀತಿಯ ಕಾನೂನುಗಳು(Law) ಬರಬೇಕೆನ್ನುವುದು ಹಲವು ವರ್ಷಗಳ ಕೂಗು. ಇದೀಗ ರಾಜ್ಯದಲ್ಲಿ ಅನುಮತಿ(Permission) ಇಲ್ಲದೇ ಮರ ಕಡಿದ್ರೆ ದಂಡದ(Fine) ಜೊತೆ ಜೈಲು ಶಿಕ್ಷೆ(Imprisonment) ವಿಧಿಸಲಾಗುತ್ತದೆ ಎಂದು ಅರಣ್ಯ ಸಚಿವ(Forest Minister) ಈಶ್ವರ್ ಖಂಡ್ರೆ(Eshwar Khandre) ಎಚ್ಚರಿಕೆ ನೀಡಿದ್ದಾರೆ. ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

Advertisement
Advertisement
Advertisement
Advertisement

ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ವಿಶ್ವ ಪರಿಸರ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ರಾಜ್ಯದ ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಅನುಮತಿ ಇಲ್ಲದೆ ಯಾರೇ ನಿಯಮ ಬಾಹಿರ ಮತ್ತು ಅಕ್ರಮವಾಗಿ ಮರ ಕಡಿದರೆ ಮರದ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

Advertisement

 ಸುಮಾರು 7 ಕೋಟಿ ಸಸಿ ನೆಡುವ ಗುರಿ ಕರ್ನಾಟಕದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸುವ ನಿಟ್ಟಿನಲ್ಲಿ “ಹಸಿರು ಹೊದಿಕೆಯ ಕ್ರಾಂತಿ” ಮಾಡುವ ಮಹದುದ್ದೇಶದಿಂದ ಕಳೆದ 2023-24ನೇ ಸಾಲಿನಲ್ಲಿ ಸುಮಾರು 5.40 ಕೋಟಿ ನೆಟ್ಟು ಪೋಷಿಸಲಾಗಿದೆ ಈ ವರ್ಷವೂ ಸಹ ರಾಜ್ಯಾದ್ಯಂತ ಸುಮಾರು 7 ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ ಎಂದರು.  ಪರಿಸರವನ್ನು ನಾವು ರಕ್ಷಿಸಿದಾಗ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರದೊಂದಿಗೆ ಸಮತೋಲನ, ಸಾಮರಸ್ಯ ಕಾಯ್ದುಕೊಳ್ಳುವುದು ಅತಿಮುಖ್ಯ. ಇದು ನಮ್ಮ ಕರ್ತವ್ಯ ಮಾತ್ರವಲ್ಲ, ನಮ್ಮ ಮುಂದಿನ ಪೀಳಿಗೆಯವರಿಗೆ ನಾವು ನೀಡಲೇಬೇಕಾದ ಬಳುವಳಿ. ಪರಿಸರವನ್ನು ಉಳಿಸೋಣ, ಹಸಿರನ್ನು ಬೆಳೆಸೋಣ ಎಂದರು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror