Advertisement
MIRROR FOCUS

ಪರಿಸರ ಸಂರಕ್ಷಣೆಗೆ ಕಾಯಿದೆ ತಿದ್ದುಪಡಿಗೆ ಚಿಂತನೆ | ರಾಜ್ಯದಲ್ಲಿ ಇನ್ಮುಂದೆ ಅನುಮತಿ ಇಲ್ಲದೇ ಮರ ಕಡಿದ್ರೆ ದಂಡದ ಜೊತೆ ಜೈಲು ಶಿಕ್ಷೆ ..! | ಅರಣ್ಯ ಸಚಿವರು

Share

ಮರಗಳನ್ನು ಕಡಿಯುವ ಮರಗಳ್ಳರ(wood thief)ವಿರುದ್ಧ ಕಠಿಣ ರೀತಿಯ ಕಾನೂನುಗಳು(Law) ಬರಬೇಕೆನ್ನುವುದು ಹಲವು ವರ್ಷಗಳ ಕೂಗು. ಇದೀಗ ರಾಜ್ಯದಲ್ಲಿ ಅನುಮತಿ(Permission) ಇಲ್ಲದೇ ಮರ ಕಡಿದ್ರೆ ದಂಡದ(Fine) ಜೊತೆ ಜೈಲು ಶಿಕ್ಷೆ(Imprisonment) ವಿಧಿಸಲಾಗುತ್ತದೆ ಎಂದು ಅರಣ್ಯ ಸಚಿವ(Forest Minister) ಈಶ್ವರ್ ಖಂಡ್ರೆ(Eshwar Khandre) ಎಚ್ಚರಿಕೆ ನೀಡಿದ್ದಾರೆ. ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ವಿಶ್ವ ಪರಿಸರ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ರಾಜ್ಯದ ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಅನುಮತಿ ಇಲ್ಲದೆ ಯಾರೇ ನಿಯಮ ಬಾಹಿರ ಮತ್ತು ಅಕ್ರಮವಾಗಿ ಮರ ಕಡಿದರೆ ಮರದ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

 ಸುಮಾರು 7 ಕೋಟಿ ಸಸಿ ನೆಡುವ ಗುರಿ : ಕರ್ನಾಟಕದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸುವ ನಿಟ್ಟಿನಲ್ಲಿ “ಹಸಿರು ಹೊದಿಕೆಯ ಕ್ರಾಂತಿ” ಮಾಡುವ ಮಹದುದ್ದೇಶದಿಂದ ಕಳೆದ 2023-24ನೇ ಸಾಲಿನಲ್ಲಿ ಸುಮಾರು 5.40 ಕೋಟಿ ನೆಟ್ಟು ಪೋಷಿಸಲಾಗಿದೆ ಈ ವರ್ಷವೂ ಸಹ ರಾಜ್ಯಾದ್ಯಂತ ಸುಮಾರು 7 ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ ಎಂದರು.  ಪರಿಸರವನ್ನು ನಾವು ರಕ್ಷಿಸಿದಾಗ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರದೊಂದಿಗೆ ಸಮತೋಲನ, ಸಾಮರಸ್ಯ ಕಾಯ್ದುಕೊಳ್ಳುವುದು ಅತಿಮುಖ್ಯ. ಇದು ನಮ್ಮ ಕರ್ತವ್ಯ ಮಾತ್ರವಲ್ಲ, ನಮ್ಮ ಮುಂದಿನ ಪೀಳಿಗೆಯವರಿಗೆ ನಾವು ನೀಡಲೇಬೇಕಾದ ಬಳುವಳಿ. ಪರಿಸರವನ್ನು ಉಳಿಸೋಣ, ಹಸಿರನ್ನು ಬೆಳೆಸೋಣ ಎಂದರು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

14 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

1 day ago