ಕರ್ನಾಟಕದ ಜೀವ ನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿಯಾಗುತ್ತಿರುವುದು ವಿಸ್ಮಯಕಾರಿಯಾಗಿದ್ದು, ಈ ಜೀವಜಲವನ್ನು ಕೊಡಗಿನವರು ಸೇರಿದಂತೆ ಸಹಸ್ರಾರು ಮಂದಿ ಭಕ್ತಿಯಿಂದ ಪೂಜಿಸುತ್ತಾರೆ. ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.
ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಜೀವ ನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುತ್ತದೆ. ಪವಿತ್ರ ತೀರ್ಥೋದ್ಭವಕ್ಕೆ ಸಿದ್ದತೆ ನಡೆಸಲಾಗುತ್ತಿದೆ.
ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.27ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ. ಈ ಬಾರಿ ರಾತ್ರಿ ತೀರ್ಥೋದ್ಬವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…