ಸತತ ವರ್ಷದ 365 ದಿನವೂ ಮೈಸೂರಿನಲ್ಲಿ ಪ್ರವಾಸಿಗರ ದಂಡೇ ಆಗಮಿಸುತ್ತಿರುತ್ತದೆ. ಆದರೆ ಕೆಲವು ದಿನಗಳಲ್ಲಿ ಅನಿವಾರ್ಯ ಕಾರಣಗಳಿಂದ ಕೆಲವು ಭಾರಿ ಮೈಸೂರಿನ ಕೆಲವು ಪ್ರವಾಸಿ ತಾಣಗಳಿಗೆ ನಿರ್ಭಂಧ ಹೇರಲಾಗುತ್ತದೆ. ಅದೇ ರೀತಿ ಈ ಬಾರಿ ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರವಾಸಿಗರು ಈ ಮಾಹಿತಿಯನ್ನು ಅನುಸರಿಸಿ ತಮ್ಮ ಮೈಸೂರು ಪ್ರವಾಸವನ್ನು ಪ್ಲಾನ್ ಮಾಡುವಂತೆ ಸೂಚನೆ ನೀಡಲಾಗಿದೆ.
ಪ್ರವಾಸಿಗರೇ ಗಮನಿಸಿ, ವಿಶ್ವವಿಖ್ಯಾತ ಮೈಸೂರು ಅರಮನೆಗೆ ಎರಡು ದಿನಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ. ಆಗಸ್ಟ್ 1 ಹಾಗೂ 2ರಂದು ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 1 ಹಾಗೂ 2ರಂದು ಜಿ 20 ಶೃಂಗಸಭೆಯಲ್ಲಿ ಭಾಗವಹಿಸುವ ವಿದೇಶದ ಗಣ್ಯರು ಮೈಸೂರು ಅರಮನೆಯನ್ನು ವೀಕ್ಷಿಸುವುದಕ್ಕೆ ಭೇಟಿ ನೀಡಲಿದ್ದಾರೆ. ಈ ಕಾರಣ ಆಗಸ್ಟ್ 1 ಹಾಗೂ 2ರಂದು ಮೈಸೂರು ಅರಮನೆ ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.
ಆಗಸ್ಟ್ 2ರಂದು ರಾತ್ರಿ 7 ರಿಂದ 8ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದ್ದು. ಈ ಕಾರ್ಯಕ್ರಮದ ವೀಕ್ಷಣೆಗೂ ಕೂಡ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ವಿದೇಶಿ ಗಣ್ಯರ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಅರಮನೆ ವೀಕ್ಷಣೆಗೆ ಬರುವ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವ ಕಾರಣ ಪ್ರವಾಸಿಗರು ಈ ಮಾಹಿತಿಯನ್ನು ಅನುಸರಿಸಿ ಪ್ಲಾನ್ ಮಾಡುವಂತೆ ಸೂಚನೆ ನೀಡಲಾಗಿದೆ.
ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ…
ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…
ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…