ವಿಜೃಂಭಣೆಯಿಂದ ನಡೆಯಲಿದೆ ಈ ಬಾರಿಯ ದಸರಾ ನಾಡಹಬ್ಬ ಆಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

August 13, 2024
10:26 AM

ನಾಡಹಬ್ಬ ಮೈಸೂರು ದಸರಾವನ್ನು(Mysore Dasara) ಈ ಬಾರಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರು ನಾಡಹಬ್ಬ ಮೈಸೂರು ದಸರಾ – 2024ರ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಹೇಳಿದರು. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದೆ(Heavy Rain). ಈ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು. ಕಳೆದ ಬಾರಿ ಬರಗಾಲದ(Drought) ಕಾರಣ ಅದ್ದೂರಿಯಾಗಿ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು, ಬಹುತೇಕ ಎಲ್ಲಾ ಜಲಾಶಯಗಳು(Dam) ತುಂಬಿವೆ. ಈ ಹಿನ್ನೆಲೆಯಲ್ಲಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವನ್ನಾಗಿ ಆಚರಿಸಲು ಮಾಡಲು ತೀರ್ಮಾನಿಸಲಾಗಿದೆ ಎಂದರು.

Advertisement
Advertisement

ಕಳೆದ ವರ್ಷ ದಸರಾ ಆಚರಣೆಗೆ 30 ಕೋಟಿ ರೂಪಾಯಿ ನೀಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಅನುದಾನ ಒದಗಿಸಲಾಗುವುದು. ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ, ಅರ್ಥಗರ್ಭಿತವಾಗಿ ಹಾಗೂ ವೈವಿಧ್ಯಮಯವಾಗಿರಬೇಕು ಎಂದು ಸೂಚಿಸಲಾಗಿದೆ. ಅಕ್ಟೋಬರ್‌ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದ್ದು, ಎಲ್ಲಾ ಮಳಿಗೆಗಳು ಉದ್ಘಾಟನೆಯಂದೇ ಸಜ್ಜುಗೊಳಿಸಲು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ಸೂಚಿಸಲಾಗಿದೆ ಎಂದರು.

Advertisement

ಆಗಸ್ಟ್‌ 21 ರಂದು ಬೆಳಿಗ್ಗೆ 10.10 ಗಂಟೆಯಿಂದ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪೂಜೆ ಮಾಡಲಾಗುವುದು. ಅಕ್ಟೋಬರ್‌ 3 ರಿಂದ 12ರ ವರೆಗೆ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10ನೇ ದಿನ ಜಂಬೂ ಸವಾರಿ ಏರ್ಪಾಡು ಮಾಡಲಾಗತ್ತದೆ. ಅಕ್ಟೋಬರ್‌ 12 ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯ ವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ ಪುಷ್ಪಾರ್ಚನೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಪ್ರವಾಸಿಗರ ಅನುಕೂಲಕ್ಕಾಗಿ ದೀಪಾಲಂಕಾರವನ್ನು ಕಳೆದ ಬಾರಿ ಒಂದು ವಾರ ವಿಸ್ತರಣೆ ಮಾಡಲಾಗಿತ್ತು. ಈ ಬಾರಿಯೂ ದಸರಾ ನಂತರವೂ ದೀಪಾಲಂಕಾರ ಅವಧಿಯನ್ನು ವಿಸ್ತರಿಸಿ 21 ದಿನಗಳ ಕಾಲ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದೆ ಎಂದರು.

ಪ್ರವಾಸಿಗರ ನೆರವಿಗಾಗಿ ಟೂರಿಸ್ಟ್‌ ಮಿತ್ರ ಮತ್ತು ಹೋಂ ಗಾರ್ಡ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಲಾಗುವುದು. ಪಾರ್ಕಿಂಗ್‌, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸಿದ್ದತೆಗಳನ್ನು ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೈಸೂರನ್ನು ಕೇಂದ್ರವಾಗಿರಿಸಿಕೊಂಡು KSRTC ಸಹಯೋಗದೊಂದಿಗೆ ಪ್ರವಾಸಿ ಸರ್ಕ್ಯುಟ್‌ ರೂಪಿಸಲಾಗುವುದು ಎಂದು ಹೇಳಿದರು.

Advertisement

ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ದೀಪಾಲಂಕಾರ, ಆಹಾರ ಮೇಳ ಮತ್ತಿತರ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ, ಅರ್ಥಪೂರ್ಣವಾಗಿ ಆಯೋಜಿಸಬೇಕು. ಸ್ಥಳೀಯರಿಗೆ ಪ್ರೋತ್ಸಾಹ ಕೊಡಬೇಕಾಗಿರುವುದರಿಂದ ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶ ದೊರಕಿಸಬೇಕು. ಇದೇ ವೇಳೆ ದಸರಾಕ್ಕೆ ಹೊಸ ರೂಪು ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸೂಚನೆ ನೀಡಲಾಗಿದೆ. ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ತೀರ್ಮಾನಕ್ಕೆ ಸಭೆ ನೀಡಿದೆ ಎಂದು ಹೇಳಿದರು.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

 ಕಸ್ತೂರಿ ರಂಗನ್ ವರದಿ ಬಗ್ಗೆ ಕೋರ್ಟ್‌ಗೆ ಮನವರಿಕೆ | ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ |
October 8, 2024
11:03 PM
by: ದ ರೂರಲ್ ಮಿರರ್.ಕಾಂ
 ದಸರಾ ಅಂಗವಾಗಿ  ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ | ಮೊದಲ ಬಹುಮಾನ 1 ಲಕ್ಷ |
October 8, 2024
10:20 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಯಂತ್ರಿಸಲು ಕ್ರಮ | ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6 ತಿಂಗಳಲ್ಲಿ 265 ಮಂದಿ ತಂಬಾಕಿನಿಂದ ದೂರ |
October 8, 2024
8:25 PM
by: ದ ರೂರಲ್ ಮಿರರ್.ಕಾಂ
 ರಾಸುಗಳಿಗೆ ತಪ್ಪದೇ ಜೀವ ವಿಮೆ ಮಾಡಿಸಿ
October 8, 2024
8:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror