ಜೀವನ ಕಟ್ಟಿಕೊಳ್ಳಲು ಬಂದ ಕಾರ್ಮಿಕರು ಮಡಿಕೇರಿಯಲ್ಲಿ ಬದುಕನ್ನೇ ಕಳೆದುಕೊಂಡಿದ್ದಾರೆ. ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ (Hill Collapse) ಪರಿಣಾಮ ಮೂವರು ಕೂಲಿ ಕಾರ್ಮಿಕರು (Labourers) ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ (Madikeri) ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.
ದುರ್ಘಟನೆ ವೇಳೆ ಸುಮಾರು 8 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಡಗು ಎಸ್‌ಪಿ ರಾಮರಾಜನ್, ಮಡಿಕೇರಿ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಎಸ್‌ಪಿ ರಾಮರಾಜನ್, ಇಂದು 15 ಅಡ್ಡಿ ಎತ್ತರದ ತಡೆಗೋಡೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಗುಡ್ಡ ಕುಸಿದು, ಕಾರ್ಮಿಕರ ಮೇಲೆ ಬಿದ್ದಿದೆ. ಅದರಲ್ಲಿ 4 ಜನರ ಮೇಲೆ ಮಣ್ಣು ಬಿದ್ದಿದೆ. ಒಬ್ಬರನ್ನು ಅಲ್ಲಿನ ಸಿಬ್ಬಂದಿಯೇ ರಕ್ಷಣೆ ಮಾಡಿದ್ದಾರೆ. ಉಳಿದ ಮೂವರು 1 ಗಂಟೆ ಕಾಲ ಮಣ್ಣಿನಡಿ ಸಿಲುಕಿದ್ದರು. ಅವರನ್ನು ರಕ್ಷಿಸಲು ಎಲ್ಲರೂ ನಿರಂತರವಾಗಿ ಶ್ರಮಿಸಿದರು ಎಂದು ಹೇಳಿದರು.
The incident took place in Stewart Hill area of Madikeri city where three laborers got trapped under the soil due to a hill collapse during the construction work.