Advertisement
ಸುದ್ದಿಗಳು

ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತ್ಯು |

Share

ಜೀವನ ಕಟ್ಟಿಕೊಳ್ಳಲು ಬಂದ ಕಾರ್ಮಿಕರು ಮಡಿಕೇರಿಯಲ್ಲಿ ಬದುಕನ್ನೇ ಕಳೆದುಕೊಂಡಿದ್ದಾರೆ. ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ (Hill Collapse) ಪರಿಣಾಮ ಮೂವರು ಕೂಲಿ ಕಾರ್ಮಿಕರು (Labourers) ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ (Madikeri) ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ದುರ್ದೈವಿಗಳು. ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಗುಡ್ಡ ಕುಸಿದಿದೆ. ಈ ಘಟನೆಯಿಂದ ಐವರು ಕೆಲಸ ಮಾಡುವ ಸಂದರ್ಭ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅದೃಷ್ಟವಶಾತ್ ಕಾರ್ಮಿಕ ರಾಜು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ.

ದುರ್ಘಟನೆ ವೇಳೆ ಸುಮಾರು 8 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಡಗು ಎಸ್‌ಪಿ ರಾಮರಾಜನ್, ಮಡಿಕೇರಿ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಎಸ್‌ಪಿ ರಾಮರಾಜನ್, ಇಂದು 15 ಅಡ್ಡಿ ಎತ್ತರದ ತಡೆಗೋಡೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಗುಡ್ಡ ಕುಸಿದು, ಕಾರ್ಮಿಕರ ಮೇಲೆ ಬಿದ್ದಿದೆ. ಅದರಲ್ಲಿ 4 ಜನರ ಮೇಲೆ ಮಣ್ಣು ಬಿದ್ದಿದೆ. ಒಬ್ಬರನ್ನು ಅಲ್ಲಿನ ಸಿಬ್ಬಂದಿಯೇ ರಕ್ಷಣೆ ಮಾಡಿದ್ದಾರೆ. ಉಳಿದ ಮೂವರು 1 ಗಂಟೆ ಕಾಲ ಮಣ್ಣಿನಡಿ ಸಿಲುಕಿದ್ದರು. ಅವರನ್ನು ರಕ್ಷಿಸಲು ಎಲ್ಲರೂ ನಿರಂತರವಾಗಿ ಶ್ರಮಿಸಿದರು ಎಂದು ಹೇಳಿದರು.

The incident took place in Stewart Hill area of ​​Madikeri city where three laborers got trapped under the soil due to a hill collapse during the construction work.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

6 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

6 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

6 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

6 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

6 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

7 hours ago