28.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 28ರಿಂದ ಮುಂಗಾರು ಮಳೆಯ ಕಡಿಮೆಯಾಗಲಿದ್ದು, 29ರಿಂದ ಶ್ರೀಲಂಕಾ ಬಳಿಯ ತಿರುಗುವಿಕೆಯ ಪರಿಣಾಮದಿಂದ ತಮಿಳುನಾಡು ಮೂಲಕ ಸಾಗಿ ಬರುವ ಗಾಳಿಯ ಪ್ರಭಾವದಿಂದ ಪೂರ್ವದಿಂದ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯ ಪ್ರಮಾಣ ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 28ರಿಂದ ತಮಿಳುನಾಡು ಮೂಲಕ ಸಾಗಿ ಬರುವ ಗಾಳಿಯ ಪ್ರಭಾವದಿಂದ ಕೊಡಗು ಹಾಗೂ 29ರಿಂದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾವೇರಿ, ಗದಗ, ದಾವಣಗೆರೆ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 28ರಿಂದ ತಮಿಳುನಾಡು ಮೂಲಕ ಸಾಗಿ ಬರುವ ಗಾಳಿಯ ಪ್ರಭಾವದಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 30ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ. ಜೊತೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…
ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…