Advertisement
ವೆದರ್ ಮಿರರ್

ಹವಾಮಾನ ವರದಿ | 27-09-2024 | ಸೆ. 29 ರಿಂದ ಗುಡುಗು ಸಹಿತ ಮಳೆ ನಿರೀಕ್ಷೆ |

Share

28.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಸೆಪ್ಟೆಂಬರ್ 28ರಿಂದ ಮುಂಗಾರು ಮಳೆಯ ಕಡಿಮೆಯಾಗಲಿದ್ದು, 29ರಿಂದ ಶ್ರೀಲಂಕಾ ಬಳಿಯ ತಿರುಗುವಿಕೆಯ ಪರಿಣಾಮದಿಂದ ತಮಿಳುನಾಡು ಮೂಲಕ ಸಾಗಿ ಬರುವ ಗಾಳಿಯ ಪ್ರಭಾವದಿಂದ ಪೂರ್ವದಿಂದ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯ ಪ್ರಮಾಣ ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 28ರಿಂದ ತಮಿಳುನಾಡು ಮೂಲಕ ಸಾಗಿ ಬರುವ ಗಾಳಿಯ ಪ್ರಭಾವದಿಂದ ಕೊಡಗು ಹಾಗೂ 29ರಿಂದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾವೇರಿ, ಗದಗ, ದಾವಣಗೆರೆ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 28ರಿಂದ ತಮಿಳುನಾಡು ಮೂಲಕ ಸಾಗಿ ಬರುವ ಗಾಳಿಯ ಪ್ರಭಾವದಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 30ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

4 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

19 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago