ಹವಾಮಾನ ವರದಿ | 08-10-2024 | ಗುಡುಗು ಸಹಿತ ಮಳೆ ಮುಂದುವರಿಕೆ | ವಾಯುಭಾರ ಕುಸಿತ ಲಕ್ಷಣ ಸ್ಪಷ್ಟವಾಗುತ್ತಿದೆ |

October 8, 2024
1:52 PM
ಅರಬ್ಬಿ ಸಮುದ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಉಂಟಾಗಿದೆ ಮತ್ತು ಮುಂದಿನ 2 ಮೂರು ದಿನಗಳಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈ ಎರಡರ ಪರಿಣಾಮ ಕಾದು ನೋಡಬೇಕಾಗಿದೆ.    

09.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಜಾಸ್ತಿಯೇ ಇರಬಹುದು. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಿನ ಬಿಟ್ಟು ದಿನ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೊಬರ್ 15ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಈ ಗುಡುಗು ಸಹಿತ ಮಳೆಯು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ( ಅಥಣಿ ಸಹಿತ), ಗದಗ, ದಾವಣಗೆರೆ, ಬಳ್ಳಾರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ದಿನ ಬಿಟ್ಟು ದಿನ ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಉಂಟಾಗಿದೆ ಮತ್ತು ಮುಂದಿನ 2 ಮೂರು ದಿನಗಳಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈ ಎರಡರ ಪರಿಣಾಮ ಕಾದು ನೋಡಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror