ಹವಾಮಾನ ವರದಿ | 30-10-2025 | ನವೆಂಬರ್‌ ಮೊದಲ ವಾರದಿಂದ ಮತ್ತೆ ಗುಡುಗು ಸಹಿತ ಮಳೆ…?

October 30, 2025
2:24 PM
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3 ರಿಂದ 4 ದಿನಗಳ ಕಾಲ ಉಳಿಯಲಿದ್ದು, ನಂತರ ಗುಜರಾತ್ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದೆ.

31.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮದಿಂದ ಗಾಳಿಯು ನೈರುತ್ಯದಿಂದ ಈಶಾನ್ಯಕ್ಕೆ ಚಲಿಸುತ್ತಿರುವುದರಿಂದ (ಮುಂಗಾರು ರೀತಿ) ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಅನಿರೀಕ್ಷಿತ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಗಡಿ ಭಾಗಗಳ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 5 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ ಮಳೆ ಕಡಿಮೆ ಇರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 4 ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 31 ರಿಂದ ಬಿಸಿಲು ವಾತಾವರಣ ಹೆಚ್ಚಿರುವ ಸಾಧ್ಯತೆಗಳಿವೆ. ನವೆಂಬರ್ 3 ಅಥವಾ 4 ರಿಂದ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4 ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3 ರಿಂದ 4 ದಿನಗಳ ಕಾಲ ಉಳಿಯಲಿದ್ದು, ನಂತರ ಗುಜರಾತ್ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror