31.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮದಿಂದ ಗಾಳಿಯು ನೈರುತ್ಯದಿಂದ ಈಶಾನ್ಯಕ್ಕೆ ಚಲಿಸುತ್ತಿರುವುದರಿಂದ (ಮುಂಗಾರು ರೀತಿ) ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಅನಿರೀಕ್ಷಿತ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಗಡಿ ಭಾಗಗಳ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 5 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ ಮಳೆ ಕಡಿಮೆ ಇರಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 4 ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 31 ರಿಂದ ಬಿಸಿಲು ವಾತಾವರಣ ಹೆಚ್ಚಿರುವ ಸಾಧ್ಯತೆಗಳಿವೆ. ನವೆಂಬರ್ 3 ಅಥವಾ 4 ರಿಂದ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4 ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3 ರಿಂದ 4 ದಿನಗಳ ಕಾಲ ಉಳಿಯಲಿದ್ದು, ನಂತರ ಗುಜರಾತ್ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದೆ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…