ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

March 12, 2025
10:03 PM
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು, ಕೊಡಗು ಭಾಗದ ಕೆಲವು ಕಡೆ ಮಳೆಯಾದ ಬಗ್ಗೆ ವರದಿ ಇದೆ.

ಕೆಲವು ದಿನಗಳಿಂದ ತಾಪಮಾನದ ಏರಿಕೆಯ ಮೂಲಕ ಸುದ್ದಿಯಾಗಿದ್ದ ಕರಾವಳಿ ಜಿಲ್ಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ. ಸಂಜೆ ಸುಳ್ಯ-ಪುತ್ತೂರು ಹಾಗೂ ಆಸುಪಾಸಿನ ತಾಲೂಕುಗಳಲ್ಲಿ ಮಳೆಯಾಗಿದ್ದರೆ ರಾತ್ರಿ ವೇಳೆ ಎರಡನೇ ಬಾರಿಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ವಿವಿದೆಡೆ ಮಳೆಯಾಗಿದೆ. ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲೂ ಮಳೆಯಾಗಿದೆ. ಕಕ್ಕಿಂಜೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ ಎಂದು ಕೃಷಿಕರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಕೊಡಗಿನ ಕೆಲವು ಕಡೆ, ಚಿಕ್ಕಮಗಳೂರು , ಮೂಡಿಗೆರೆ ಪ್ರದೇಶದ ಕೆಲವು ಕಡೆ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಿಂದ ಕರಾವಳಿ ಜಿಲ್ಲೆಯ ಜನರು ಆತಂಕಕ್ಕೂ ಒಳಗಾಗಿದ್ದರು. ಕೃಷಿ ನಷ್ಟವಾಗುವ ಆತಂಕ್ಕೆ ಒಳಗಾಗಿದ್ದರು. ಇದೀಗ ಮಳೆಯಾಗುವ ಮೂಲಕ ತಾಪಮಾನ ಇಳಿಕೆಯಾಗಿದೆ, ಆದರೆ ಅಡಿಕೆ ಬೆಳೆಯ ಮೇಲೆ ಪರಿಣಾಮ ಬೀರಬಹುದು ಎನ್ನುವ ಭೀತಿಯನ್ನು ಕೃಷಿಕರು ವ್ಯಕ್ತಪಡಿಸಿದ್ದಾರೆ.………ಮುಂದೆ ಓದಿ……..

ಬಂಗಾಳಕೊಲ್ಲಿ ವಾಯುಭಾರಕುಸಿತವು ಅರಬ್ಬೀಸಮುದ್ರದತ್ತ ಚಲಿಸುತ್ತಿರುವಾಗ ಇವತ್ತು ಮಲೆನಾಡು ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಇತ್ತು. ಆದರೆ ನಿರೀಕ್ಷೆಗಿಂತ ಅಧಿಕ ಮಳೆ ಬಂದಿದೆ. ಬೆಳ್ತಂಗಡಿ ಸುಳ್ಯ ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರು ಬಂಟ್ವಾಳ ಮಂಗಳೂರು ತಾಲೂಕುಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲಿಯೂ ಮಳೆಯಾಗಿದೆ. ಸಂಜೆ ಮತ್ತು ರಾತ್ರಿ 2 ಹಂತದಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ವಿಶ್ಲೇಷಕ ರಘುರಾಮ ಕಂಪದಕೋಡಿ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror