01.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ತಡ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಮೇ ಮೊದಲ 3, 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ, ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಮಳೆಯ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶಪುರ ಸುತ್ತಮುತ್ತ, ಚಿಕ್ಕಮಗಳೂರನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಶಿವಮೊಗ್ಗ ಹೊರತುಪಡಿಸಿ ಉಳಿದ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮೇ 6 ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೂ ಒಂದೆರಡು ಕಡೆ ಸೀಮಿತ ಪ್ರದೇಶಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ, ಸೀಮಿತ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ ಒಳನಾಡು ಸಹಿತ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…
ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…
2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…
ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490