ಹವಾಮಾನ ವರದಿ | 04-10-2025 | ರಾಜ್ಯದಲ್ಲಿ ಇನ್ನು ಗುಡುಗು ಸಹಿತ ಮಳೆ

October 4, 2025
2:18 PM
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿ ತನಕ ಸಾಗಿ ಮತ್ತೆ ತಿರುಗಿ ಗುಜರಾತ್ ಕರಾವಳಿ ಕಡೆ ಪಯಣಿಸುವ ಸೂಚನೆಗಳಿವೆ.

05.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ, ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಘಟ್ಟದ ಕೆಳಗಿನ ಪ್ರದೇಶಗಳ ಸುತ್ತಮುತ್ತ ಮಳೆಯ ಸಾಧ್ಯತೆ ಇದೆ.  ಈಗಿನಂತೆ ಅಕ್ಟೊಬರ್ 6 ಮತ್ತು 7 ರಂದು ಕರಾವಳಿಯಲ್ಲಿ ಮಳೆ ಬಿಡುವು ಪಡೆದರೂ, 8 ರಿಂದ ದಕ್ಷಿಣ ಕನ್ನಡ ಹಾಗೂ 9 ರಿಂದ ಇತರ ಕರಾವಳಿ ಜಿಲ್ಲೆಗಳಲ್ಲಿಯೂ ಸಂಜೆಯ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಡ ಅಥವಾ ಸಂಜೆ ಗುಡುಗು ಸಹಿತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 5 ರಿಂದ ಮಲೆನಾಡು ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, 8 ರಿಂದ ಗುಡುಗು ಸಹಿತ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.  ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿ ತನಕ ಸಾಗಿ ಮತ್ತೆ ತಿರುಗಿ ಗುಜರಾತ್ ಕರಾವಳಿ ಕಡೆ ಪಯಣಿಸುವ ಸೂಚನೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror