Advertisement
ವೆದರ್ ಮಿರರ್

ಹವಾಮಾನ ವರದಿ | 05-10-2025 | ಅ.8 ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆರಂಭ

Share

06.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 8ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಂಜೆಯ ವೇಳೆಗೆ ಗುಡುಗು ಸಿಡಿಲು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 8 ರಿಂದ ಮಲೆನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅಕ್ಟೊಬರ್ 8ರಿಂದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ 9 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಒಮಾನ್ ಕರಾವಳಿಯ ಚಂಡಮಾರುತವು ಅಲ್ಲಿಯೇ ದುರ್ಬಲಗೊಂಡ ಅಕ್ಟೊಬರ್ 12ರ ಸುಮಾರಿಗೆ ಗುಜರಾತ್ ಸಮೀಪ ತಲಪುವ ನಿರೀಕ್ಷೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

22 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

22 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago