08.10.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಕಾಸರಗೋಡು ಜಿಲ್ಲೆಯಲ್ಲಿ ಕರಾವಳಿ ತೀರ ಭಾಗದ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಬೆಳ್ತಂಗಡಿ, ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 8 ರಿಂದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 8 ರಿಂದ ಮಲೆನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಒಳನಾಡು : ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಯಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಅಕ್ಟೊಬರ್ 8 ರಿಂದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನಂತರದ ದಿನಗಳಲ್ಲಿ ಉಳಿದ ಜಿಲ್ಲೆಗಳಲ್ಲಿಯೂ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಗುಜರಾತ್ ಕಡೆಗೆ ಮರುಪ್ರಯಾಣ ಸಾಧ್ಯತೆ ಕಡಿಮೆಯಾಗಿದ್ದು, ಒಮಾನ್ ಕರಾವಳಿಯಲ್ಲೇ ಅಕ್ಟೊಬರ್ 12ರ ಸುಮಾರಿಗೆ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…