Advertisement
ಸುದ್ದಿಗಳು

ಹವಾಮಾನ ವರದಿ | 07-10-2025 | ಗುಡುಗು ಸಹಿತ ಮಳೆ ಯಾವಾಗಿನಿಂದ ಆರಂಭ

Share

08.10.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಕಾಸರಗೋಡು ಜಿಲ್ಲೆಯಲ್ಲಿ ಕರಾವಳಿ ತೀರ ಭಾಗದ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಬೆಳ್ತಂಗಡಿ, ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 8 ರಿಂದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 8 ರಿಂದ ಮಲೆನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಯಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಅಕ್ಟೊಬರ್ 8 ರಿಂದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನಂತರದ ದಿನಗಳಲ್ಲಿ ಉಳಿದ ಜಿಲ್ಲೆಗಳಲ್ಲಿಯೂ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಗುಜರಾತ್ ಕಡೆಗೆ ಮರುಪ್ರಯಾಣ ಸಾಧ್ಯತೆ ಕಡಿಮೆಯಾಗಿದ್ದು, ಒಮಾನ್ ಕರಾವಳಿಯಲ್ಲೇ ಅಕ್ಟೊಬರ್ 12ರ ಸುಮಾರಿಗೆ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

4 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

9 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

14 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago