10.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ.
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಜೆ ರಾತ್ರಿ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಸೆಕೆ, ಮೋಡ ಹಾಗೂ ಸಂಜೆ, ರಾತ್ರಿಯ ವೇಳೆ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಸಂಜೆಯ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಹೆಚ್ಚಿನ ಭಾಗಗಳಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಸಂಜೆ, ರಾತ್ರಿಯ ವೇಳೆ ಮಳೆ ಮುಂದುವರಿಯುವ ಲಕ್ಷಣಗಳಿವೆ
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಅಲ್ಲಲ್ಲಿ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ ಕರಾವಳಿಯಲ್ಲಿ ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…
ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490