Advertisement
ವೆದರ್ ಮಿರರ್

ಹವಾಮಾನ ವರದಿ | 07-10-2024 |ಮುಂದಿನ 10 ದಿನಗಳವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣ |

Share

08.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಧ್ಯ ಅಕ್ಟೊಬರ್ 9, 10 ರಂದು ಸ್ವಲ್ಪ ಕಡಿಮೆ ಇರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಕಾಣಿಸುತ್ತಿದೆ. ನಡುವೆ ಒಂದೆರಡು ದಿನ ಕಡಿಮೆ ಇರಬಹುದು.

ಒಳನಾಡು : ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಅರಬ್ಬಿ ಸಮುದ್ರದ ಹಾಗೂ ಬಂಗಾಳಕೊಲ್ಲಿಯಲ್ಲಿ ಗಾಳಿಯ ಬೀಸುವಿಕೆ ನಿಧಾನ ಗತಿಯಲ್ಲಿದೆ ಮತ್ತು ಹೆಚ್ಚೇನ ಒತ್ತಡವೂ ಇಲ್ಲದಿರುವುದರಿಂದ ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ ಗಾಳಿ ಅಥವಾ ಮಾರತಗಳ ಚಲನೆಯ ದಿಕ್ಕು ನಿರ್ದಿಷ್ಟವಾಗಲ್ಲದಿರುವುದರಿಂದ ಕೆಲವು ಭಾಗಗಳಲ್ಲಿ ಮೇಘ ಸ್ಪೋಟದಂತಹ ಮಳೆಯಾಗುತ್ತಿದೆ. ಈ ಅನಿಶ್ಚಿತತೆ ಹಿಂಗಾರು ಆರಂಭವಾಗುವ ತನಕವೂ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

4 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

12 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

14 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

20 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

21 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago