02.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಅಲ್ಲಲ್ಲಿ, ದಕ್ಷಿಣ ಕನ್ನಡ, ಉಡುಪಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ, ಉತ್ತರ ಕನ್ನಡ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 2 ರಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿದ್ದರೂ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಒಳನಾಡು : ಉತ್ತರ ಒಳನಾಡಿನ ಬೀದರ್ ಹಲವು ಭಾಗಗಳಲ್ಲಿ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ, ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ, ತುಮಕೂರು, ಚಿಕ್ಕಬಳ್ಳಾಪುರ ಬಹುತೇಕ ಭಾಗಗಳಲ್ಲಿ, ಚಿತ್ರದುರ್ಗದ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳೂ ಸೇರಿಕೊಂಡು ಈಗಿನ ಗುಡುಗು ಸಹಿತ ಮಳೆಯಾಗುತ್ತಿದೆ.
2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…
2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…
ಬಾಟಲ್ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…
ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…
ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…