ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |

April 4, 2025
1:10 PM
ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಎ.7 ರಿಂದ ಕಡಿಮೆಯಾಗುವ ಲಕ್ಷಣವಿದೆ.

05.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ಆದರೆ ಮಧ್ಯಾಹ್ನ ನಂತರ, ಸಂಜೆ ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿದ್ದರೆ ಘಟ್ಟದ ಮೋಡಗಳು ಪೂರ್ವಕ್ಕೆ ಚಲಿಸುವ ಸಾಧ್ಯತೆಗಳಿವೆ.) ಈಗಿನಂತೆ ಎಪ್ರಿಲ್ 7 ರಿಂದ ಕರಾವಳಿಯಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಹಾಗೂ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 7ರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 6ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ
June 19, 2025
7:03 AM
by: ದ ರೂರಲ್ ಮಿರರ್.ಕಾಂ
ಜಲ ಸಂರಕ್ಷಣೆ ಅಭಿಯಾನ ಸಪ್ತಾಹ | ಬೆಂಗಳೂರಿನ ಜಲ ಮಂಡಳಿಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ
June 19, 2025
6:55 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group