05.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ಆದರೆ ಮಧ್ಯಾಹ್ನ ನಂತರ, ಸಂಜೆ ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿದ್ದರೆ ಘಟ್ಟದ ಮೋಡಗಳು ಪೂರ್ವಕ್ಕೆ ಚಲಿಸುವ ಸಾಧ್ಯತೆಗಳಿವೆ.) ಈಗಿನಂತೆ ಎಪ್ರಿಲ್ 7 ರಿಂದ ಕರಾವಳಿಯಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಹಾಗೂ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 7ರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 6ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ ಎಂದು…
2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ…
ರಾಜ್ಯದಲ್ಲಿ ಈಗಾಗಲೇ ಮಲೆನಾಡು ಪ್ರದೇಶದಲ್ಲಿ ಕಳೆದ ವರ್ಷ 100 ಕಾಲುಸಂಕ ನಿರ್ಮಾಣ ಮಾಡಲಾಗಿದೆ.…
ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು…
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು…