ಬೆಂಗಳೂರು, ಕೊಡಗು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.
ಮಂಡ್ಯ ಕೆವಿಕೆ, ಮಾಲೂರು, ಸರಗೂರಿನಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ, ಮುದಗಲ್, ಕೃಷ್ಣರಾಜಸಾಗರ, ಕನಕಪುರ, ಹರದನಹಳ್ಳಿ, ಗಬ್ಬೂರು, ಜಾಲಹಳ್ಳಿ, ರಾಯಚೂರು, ಸಾಲಿಗ್ರಾಮ, ಶ್ರೀರಂಗಪಟ್ಟಣ, ಬೆಂಗಳೂರು ಕೆಎಎಲ್, ಬಂಡೀಪುರ, ಕೊಳ್ಳೇಗಾಲ, ಚಾಮರಾಜನಗರ, ಮೈಸೂರು, ಹಲಬರ್ಗಾ, ಹುಲ್ಸೂರು, ಸಾಯಿಗಾಂವ್, ಭಾಲ್ಕಿ, ದೇವದುರ್ಗ, ಕೋಲಾರ, ಗೌರಿಬಿದನೂರು, ತೊಂಡೇಭಾವಿ, ಜ್ಞಾನಭಾರತಿ ವಿವಿ ಕ್ಯಾಂಪಸ್, ಗೋಪಾಲ್ನಗರ, ಉತ್ತರಹಳ್ಳಿ, ಬೆಂಗಳೂರು ನಗರ, ಮಂಠಾಳ, ನಿಟ್ಟೂರು, ಔರಾದ್, ಕುರ್ಡಿ, ಮಸ್ಕಿ, ಮಾನ್ವಿ, ಕಕ್ಕೇರಿ, ರಾಮನಗರ, ಖಜೂರಿ, ಮುಡಬಿ, ಹೊಸಕೋಟೆ, ಮಂಡ್ಯ, ಬರಗೂರು, ಚಿಕ್ಕಬಳ್ಳಾಪುರ, ಮೂಡಿಗೆರೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿಯಿಂದಲೂ ಮಳೆ ಸುರಿಯುತ್ತಿದೆ, ಮೋಡಕವಿದ ವಾತಾವರಣವಿರಲಿದ್ದು, ಇಡೀ ದಿನವೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ದೊರೆತಿದೆ. ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಕೊಡಗು, ಮೈಸೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ಮೇ 3ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…
ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…
ದೇಶದ ಸೈನಿಕರಿಗೆ ಗೌರವ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾಳೆ…
ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ…
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490