12.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :………ಮುಂದೆ ಓದಿ……..
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಾಗಲೇ ನಿನ್ನೆಯಿಂದ ಉಷ್ಣಾಂಶ ಏರಿಕೆಯಾಗುತ್ತಲಿದ್ದು, ಮಾರ್ಚ್ 17 ರಿಂದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 12 ರಂದು ಕೊಡಗು ಹಾಗೂ ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಮಾರ್ಚ್ 13ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ಮಾರ್ಚ್ 17 ರಿಂದ ಗುಡುಗು ಸಹಿತ ಬೇಸಿಗೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ಚಾಮರಾಜನಗರ, ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಜಿಲ್ಲೆಗಳ ತಮಿಳುನಾಡು ಗಡಿಭಾಗಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 13ರಿಂದ ಒಣಹವೆ ಆವರಿಸಲಿದ್ದು, ಮಾರ್ಚ್ 17ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ಶ್ರೀಲಂಕಾ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತದಂತಹ ತಿರುವಿಕೆ ಪರಿಣಾಮದಿಂದ ಈಗಿನ ಮಳೆಯ ಸ್ಥಿತಿ ಇದೆ. ಅದು ಶಿಥಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ. ಮಾರ್ಚ್ 17ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿಯ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಬೇಸಿಗೆ ಮಳೆಯು ಆರಂಭವಾಗುವ ಲಕ್ಷಣಗಳಿವೆ.