Advertisement
ವೆದರ್ ಮಿರರ್

ಹವಾಮಾನ ವರದಿ | 11-03-2025 | ಮೋಡದ ವಾತಾವರಣ – ಕೆಲವು ಕಡೆ ತುಂತುರು ಮಳೆ ನಿರೀಕ್ಷೆ | ಮಾ.17 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ |

Share

12.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :………ಮುಂದೆ ಓದಿ……..

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.  ಈಗಾಗಲೇ ನಿನ್ನೆಯಿಂದ ಉಷ್ಣಾಂಶ ಏರಿಕೆಯಾಗುತ್ತಲಿದ್ದು, ಮಾರ್ಚ್ 17 ರಿಂದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 12 ರಂದು ಕೊಡಗು ಹಾಗೂ ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಮಾರ್ಚ್ 13ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ಮಾರ್ಚ್ 17 ರಿಂದ ಗುಡುಗು ಸಹಿತ ಬೇಸಿಗೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ಚಾಮರಾಜನಗರ, ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಜಿಲ್ಲೆಗಳ ತಮಿಳುನಾಡು ಗಡಿಭಾಗಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 13ರಿಂದ ಒಣಹವೆ ಆವರಿಸಲಿದ್ದು, ಮಾರ್ಚ್ 17ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಬೇಸಿಗೆ ಮಳೆ ಆರಂಭವಾಗುವ ಲಕ್ಷಣಗಳಿವೆ.

ಶ್ರೀಲಂಕಾ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತದಂತಹ ತಿರುವಿಕೆ ಪರಿಣಾಮದಿಂದ ಈಗಿನ ಮಳೆಯ ಸ್ಥಿತಿ ಇದೆ. ಅದು ಶಿಥಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ. ಮಾರ್ಚ್ 17ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿಯ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಬೇಸಿಗೆ ಮಳೆಯು ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ…

1 day ago

ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…

1 day ago

ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ

ಸಾಗುವಳಿ ಚೀಟಿ ಪಡೆಯಲು ರೈತರಿಗೆ ಅರಣ್ಯ ಇಲಾಖೆಯಿಂದ ಎನ್‌ಒಸಿ ನೀಡುವ ಕುರಿತು ಜಂಟಿ…

2 days ago

ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ

ರಾಜ್ಯದ ವಿವಿಧ ಭಾಗಗಳಿಂದ ಸಂಗ್ರಹಿಸಿದ 63 ಪೆಟ್ರೋಲ್ ಮಾದರಿಗಳ ಪರೀಕ್ಷೆಯಲ್ಲಿ ನಿಗದಿತ ಶೇ.20ಕ್ಕಿಂತ…

2 days ago

ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ

ಸಾಂಪ್ರದಾಯಿಕ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲದ ಗುಣಮಟ್ಟದ ಮೇಲೆ…

3 days ago

ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ

ಬರಪೀಡಿತ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಯಾದಗಿರಿ…

3 days ago