ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕಾದಾದ್ಯಂತ ನೈರುತ್ಯ ಮಾನ್ಸೂನ್ ಸಾಮಾನ್ಯವಾಗಿದ್ದು ಒಳನಾಡಿನಲ್ಲಿ ದುರ್ಬಲವಾಗಿತ್ತು. ಬಂಟ್ವಾಳ, ಕ್ಯಾಸಲ್‌ರಾಕ್ ನಲ್ಲಿ 4 ಸೆಂ.ಮೀ ಮಳೆಯಾಗಿದೆ. ಉತ್ತರಕನ್ನಡ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 7 ದಿನಗಳಲ್ಲಿ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಬಹುದು. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…