Advertisement
ಸುದ್ದಿಗಳು

ಹವಾಮಾನ ವರದಿ | 04-10-2024 | ಗುಡುಗು ಸಹಿತ ಮಳೆ ಮುಂದುವರಿಕೆ | ಹಿಂಗಾರು ಮತ್ತಷ್ಟು ವಿಳಂಬ |

Share
05.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಪಶ್ಚಿಮದ ಮೋಡದಿಂದ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉತ್ತರ ಕನ್ನಡ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಲ್ಲಲ್ಲಿ ದಿನಕ್ಕೊಂದು ಮಳೆಯಂತೆ ಅಕ್ಟೊಬರ್ 13ರ ತನಕವೂ ಮುಂದುವರಿಯುವ ಲಕ್ಷಣಗಳಿವೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ದಾವಣಗೆರೆ, ಬಳ್ಳಾರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸೂಚನೆಗಳಿವೆ.
ಈಗಿನ ಮಳೆಯು ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾದ ಮೋಡಗಳಿಂದಾಗುತ್ತಿವೆ. ಹಿಂಗಾರು ಮಾರುತಗಳು ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

7 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

7 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

18 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

24 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

24 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

24 hours ago