ಹವಾಮಾನ ವರದಿ | 04-08-2025 | ಆಗಸ್ಟ್ 8ರ ತನಕ ಗುಡುಗು ಸಹಿತ ಮಳೆ | ಮುಂಗಾರು ದುರ್ಬಲತೆ ಸಾಧ್ಯತೆ |

August 4, 2025
12:40 PM

05.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಆಗಸ್ಟ್ 8 ರ ತನಕ ಗುಡುಗು ಸಹಿತ ಮಳೆ ಮುಂದುವರಿಯುವ ಸೂಚನೆಗಳಿವೆ. 6 ಮತ್ತು 7 ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 8ರ ತನಕ ಗುಡುಗು ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಒಂದೆರಡು ಕಡೆ, ಧಾರವಾಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ, ಕೊಪ್ಪಳ ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 8ರ ತನಕ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೇರಳ ಹಾಗೂ ತಮಿಳುನಾಡು ದಕ್ಷಿಣ ಭಾಗದಲ್ಲಿ ಸಣ್ಣ ಮೇಲ್ಮೈ ಸುಳಿಗಾಳಿ ಉಂಟಾಗಿದ್ದರಿಂದ ಕೇರಳದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಈಗಿನ ಲೆಕ್ಕಾಚಾರದ ಪ್ರಕಾರ ತಿರುಗುವಿಕೆಯು ಕೇರಳ ಕರಾವಳಿ ಮೂಲಕ ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿದ್ದುದರಿಂದ ಆಗಸ್ಟ್ 6 ಹಾಗೂ 7ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಮುನ್ಸೂಚನೆ ಇದೆ.

ಭೂ ಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಎರಡು ವಾಯುಭಾರ ಕುಸಿತ ಉಂಟಾಗಿದ್ದರ ಪರಿಣಾಮದಿಂದ ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಬಂಗಾಳಕೊಲ್ಲಿಯ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಆಗಸ್ಟ್ 8ರ ತನಕ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror