ಹುಲಿ ಸಮೀಕ್ಷೆ-2024 ವರದಿ ಬಿಡುಗಡೆ | ಕಳೆದ ವರ್ಷಕ್ಕಿಂತ ಈ ಬಾರಿ ಹುಲಿಗಳ ಸಂಖ್ಯೆ ಇಳಿಮುಖ

March 29, 2025
9:31 AM
ರಾಜ್ಯದಲ್ಲಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿನ ಹುಲಿಗಳ ಗಣತಿ  ಕಾರ್ಯವನ್ನು ನಡೆಸಿದ್ದು,  ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ   ಹುಲಿಗಳ ಸಂಖ್ಯೆ ಕಡಿಮೆಯಾಗಿದೆ.

ರಾಜ್ಯದಲ್ಲಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿನ ಹುಲಿಗಳ ಗಣತಿ  ಕಾರ್ಯವನ್ನು ನಡೆಸಿದ್ದು,  ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ   ಹುಲಿಗಳ ಸಂಖ್ಯೆ ಕಡಿಮೆಯಾಗಿದೆ . ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ 2024 ವರದಿ ಬಿಡುಗಡೆ ಮಾಡಿದೆ. ವರದಿಯಲ್ಲಿ  ರಾಜ್ಯದಲ್ಲಿ 393 ಹುಲಿಗಳಿವೆ ಎಂದು ತಿಳಿಸಿದೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ , ಎನ್‌ಟಿಸಿಎ ದ ಮಾರ್ಗಸೂಚಿ ಹಾಗೂ ಅಖಿಲ ಭಾರತ ಹುಲಿ ಗಣತಿ ಭಾಗವಾಗಿ ಎಲ್ಲ ರಾಜ್ಯಗಳ ಹುಲಿ ವಾಸಸ್ಥಾನ ಪ್ರದೇಶಗಳಲ್ಲಿ ಪ್ರತಿ 4 ವರ್ಷಕ್ಕೊಮ್ಮೆ ಹುಲಿ, ಆನೆ ಸೇರಿದಂತೆ ಇನ್ನಿತರ ವನ್ಯಜೀವಿಗಳ ಗಣತಿ ನಡೆಸಲಾಗುತ್ತದೆ.  2024ರಲ್ಲಿ ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಮೀಕ್ಷೆ ನಡೆಸಲಾಗಿದ್ದು, 2023ಕ್ಕೆ ಹೋಲಿಸಿದರೆ ಹುಲಿಗಳ ಸಂಖ್ಯೆ 15 ಕಡಿಮೆಯಾಗಿದೆ. ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆ, ಬಂಡೀಪುರ, ಬಿಳಿಗಿರಿ ರಂಗನಾಥ ಸ್ವಾಮಿ ಬೆಟ್ಟ, ಕಾಳಿ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗಿದ್ದು,  5 ಹುಲಿ ಸಂರಕ್ಷಿತ ಪ್ರದೇಶದಲ್ಲಿ 2160 ಕ್ಯಾಮರಾ ಟ್ರ್ಯಾಪ್‌ ಅಳವಡಿಸಲಾಗಿದ್ದು, 61 ಲಕ್ಷ ವನ್ಯಜೀವಿ ಚಿತ್ರಗಳನ್ನು ಪಡೆಯಲಾಗಿತ್ತು. ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಾಂಶದ ಮೂಲಕ ಹುಲಿ ಚಿತ್ರಗಳನ್ನು ಪ್ರತ್ಯೇಕಿಸಿ, ಪ್ರತಿ ಹುಲಿ ಪಟ್ಟೆಗಳನ್ನಾಧರಿಸಿ ಹುಲಿಗಳ ಸಂಖ್ಯೆ ಲೆಕ್ಕ ಹಾಕಲಾಗಿದೆ. ಅದರ ಆಧಾರದ ಮೇಲೆ ವಾರ್ಷಿಕ ವರದಿ ಸಿದ್ಧಪಡಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror