ರಾಜ್ಯದಲ್ಲಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿನ ಹುಲಿಗಳ ಗಣತಿ ಕಾರ್ಯವನ್ನು ನಡೆಸಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹುಲಿಗಳ ಸಂಖ್ಯೆ ಕಡಿಮೆಯಾಗಿದೆ . ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ 2024 ವರದಿ ಬಿಡುಗಡೆ ಮಾಡಿದೆ. ವರದಿಯಲ್ಲಿ ರಾಜ್ಯದಲ್ಲಿ 393 ಹುಲಿಗಳಿವೆ ಎಂದು ತಿಳಿಸಿದೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ , ಎನ್‌ಟಿಸಿಎ ದ ಮಾರ್ಗಸೂಚಿ ಹಾಗೂ ಅಖಿಲ ಭಾರತ ಹುಲಿ ಗಣತಿ ಭಾಗವಾಗಿ ಎಲ್ಲ ರಾಜ್ಯಗಳ ಹುಲಿ ವಾಸಸ್ಥಾನ ಪ್ರದೇಶಗಳಲ್ಲಿ ಪ್ರತಿ 4 ವರ್ಷಕ್ಕೊಮ್ಮೆ ಹುಲಿ, ಆನೆ ಸೇರಿದಂತೆ ಇನ್ನಿತರ ವನ್ಯಜೀವಿಗಳ ಗಣತಿ ನಡೆಸಲಾಗುತ್ತದೆ. 2024ರಲ್ಲಿ ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಮೀಕ್ಷೆ ನಡೆಸಲಾಗಿದ್ದು, 2023ಕ್ಕೆ ಹೋಲಿಸಿದರೆ ಹುಲಿಗಳ ಸಂಖ್ಯೆ 15 ಕಡಿಮೆಯಾಗಿದೆ. ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆ, ಬಂಡೀಪುರ, ಬಿಳಿಗಿರಿ ರಂಗನಾಥ ಸ್ವಾಮಿ ಬೆಟ್ಟ, ಕಾಳಿ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗಿದ್ದು, 5 ಹುಲಿ ಸಂರಕ್ಷಿತ ಪ್ರದೇಶದಲ್ಲಿ 2160 ಕ್ಯಾಮರಾ ಟ್ರ್ಯಾಪ್ ಅಳವಡಿಸಲಾಗಿದ್ದು, 61 ಲಕ್ಷ ವನ್ಯಜೀವಿ ಚಿತ್ರಗಳನ್ನು ಪಡೆಯಲಾಗಿತ್ತು. ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಾಂಶದ ಮೂಲಕ ಹುಲಿ ಚಿತ್ರಗಳನ್ನು ಪ್ರತ್ಯೇಕಿಸಿ, ಪ್ರತಿ ಹುಲಿ ಪಟ್ಟೆಗಳನ್ನಾಧರಿಸಿ ಹುಲಿಗಳ ಸಂಖ್ಯೆ ಲೆಕ್ಕ ಹಾಕಲಾಗಿದೆ. ಅದರ ಆಧಾರದ ಮೇಲೆ ವಾರ್ಷಿಕ ವರದಿ ಸಿದ್ಧಪಡಿಸಿದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…