ದುಬೈಯ ಭಕ್ತರೊಬ್ಬರು ಶುಕ್ರವಾರ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನಕ್ಕೆ 1 ಕೋಟಿ ಕಾಣಿಕೆಯನ್ನು ನೀಡಿದ್ದಾರೆ, ಈ ಕುರಿತು ದೇಗುಲದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ದುಬೈನಲ್ಲಿ ಲೆಕ್ಕ ಪರಿಶೋಧಕರಾಗಿರುವ ಎಂ ಹನುಮಂತಕುಮಾರ್ ಅವರು ಶುಕ್ರವಾರ ದೇಗುಲದಲ್ಲಿ ಪೂಜೆ ಮುಗಿದ ಬಳಿಕ ಡಿಮ್ಯಾಂಡ್ ಡ್ರಾಫ್ಟ್ ಮೂಲಕ 1 ಕೋಟಿಯನ್ನು ತಿರುಮಲ ತಿರುಪತಿ ದೇವಸ್ಥಾನ ಅಧ್ಯಕ್ಷ ವೈ ವಿ ಸುಬ್ಬಾ ರೆಡ್ಡಿಗೆ ಹಸ್ತಾಂತರಿಸಿದ್ದಾರೆ.
ಬಡವರು ಮತ್ತು ನಿರ್ಗತಿಕರಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವ ಟಿಟಿಡಿ ಕಲ್ಯಾಣ ಟ್ರಸ್ಟ್‌ಗಳಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹಣವನ್ನು ಬಳಸಿಕೊಳ್ಳುವಂತೆ ಅವರು ದೇವಸ್ಥಾನದ ಆಡಳಿತ ಮಂಡಳಿಗೆ ವಿನಂತಿ ಮಾಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel