ವಾಯುಭಾರ ಕುಸಿತದ ಕಾರಣದಿಂದ ಭಾರೀ ಮಳೆಯ ಪ್ರಭಾವ ಆಂಧ್ರ ಪ್ರದೇಶದ ಮೇಲೂ ಬೀರಿದ್ದು ತಿರುಪತಿ ಹಾಗೂ ನೆಲ್ಲೂರು ನಗರದಲ್ಲಿ ವಿಪರೀತ ಮಳೆಯಾಗಿದೆ. ಭಾರೀ ಮಳೆಯ ಕಾರಣದಿಂದ ಭಾರೀ ಮಳೆಯಿಂದಾಗಿ ತಿರುಮಲ ಬೆಟ್ಟ ಘಾಟಿ ರಸ್ತೆ ಬಂದ್ ಮಾಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಿರುಪತಿ ಮತ್ತು ಚಿತ್ತೂರಿನಲ್ಲಿ ಭಾರೀ ಮಳೆಯಾಗಿದೆ. ತಿರುಪತಿ-ಕಡಪ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ದೃಶ್ಯ ಇದೀಗ ಕಂಡುಬಂದಿದೆ. ಈ ನಡುವೆ ತಿರುಪತಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು ವಾಹನಗಳು, ಹಸುಗಳು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಬಹುತೇಕ ಎಲ್ಲ ಪ್ರದೇಶಗಳು ಜಲಾವೃತವಾಗಿರುವುದಷ್ಟೇ ಅಲ್ಲದೆ, ನಗರದ ರಸ್ತೆಗಳಲ್ಲಿ ಕೃತಕ ಹೊಳೆಗಳು ಸೃಷ್ಟಿಯಾಗಿವೆ.
ಆಂಧ್ರ ಪ್ರದೇಶದದ ಕರಾವಳಿ ಹಾಗೂ ಇತರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಸುತ್ತ ಮುತ್ತಲ ಜಿಲ್ಲೆಗಳಲ್ಲೂ ಮಳೆ ಆರ್ಭಟ ಜೋರಾಗಿಯೇ ಇದೆ. ತಿರುಪತಿ ಭಾಗಶಃ ಮುಳುಗಿದೆ.ತಿರುಪತಿಯಲ್ಲಿ ವಾಸಿಸುತ್ತಿದ್ದ ಜನರು 1996 ರಿಂದ ಈ ದೊಡ್ಡ ಪ್ರವಾಹವನ್ನು ನೋಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಕ್ಷರಶಃ ನಗರದ ಪ್ರತಿಯೊಂದು ರಸ್ತೆಗಳು ಜಲಾವೃತವಾಗಿವೆ. ಇಂದು ರಾತ್ರಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ಈಗಾಗಲೇ ಹಲವು ಕಡೆ ಭೂಕುಸಿತ ಕೂಡಾ ಸಂಭವಿಸಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಹಾಗೂ ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ದೇಗುಲದ ಅಧಿಕಾರಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…