ಹವಾಮಾನ ವರದಿ | ಕರಾವಳಿಗೆ ಹೀಟ್‌ವೇವ್ ಎಚ್ಚರಿಕೆ‌ | ವಾತಾವರಣದ ಉಷ್ಣತೆ ಎಷ್ಟು ಏರಿಕೆಯಾಗುವ ಸಾಧ್ಯತೆ ಇದೆ ? |

March 3, 2023
4:10 PM

ಹವಾಮಾನ ಬದಲಾವಣೆಯಾಗುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದ್ದು ಮುಂದಿನ ಒಂದೆರಡು ದಿನಗಳಲ್ಲಿ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement
Advertisement

ಮುಂದಿನ 48 ಗಂಟೆಗಳ ಅವಧಿಯಲ್ಲಿ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಕಾರಣದಿಂದ  48 ಗೆಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿದೆ ಎಂದು ಇಲಾಖೆ ಎಚ್ಚರಿಸಿದೆ.

Advertisement

ಕರ್ನಾಟಕದಲ್ಲಿ ದಿನೇ ದಿನೇ ಬಿಸಿಲಿನ ಕಾವು ಹೆಚ್ಚುತ್ತಿದೆ. ಈ ಬಾರಿ ಅತ್ಯಧಿಕ ಉ‍ಷ್ಣಾಂಶದ ದಾಖಲಾಗುವ ಬಗ್ಗೆ ಮುನ್ಸೂಚನೆಯನ್ನು  ಭಾರತೀಯ ಹವಾಮಾನ ಇಲಾಖೆ  ನೀಡಿದೆ. ಮಾರ್ಚ್, ಏಪ್ರೀಲ್ ಹಾಗೂ ಮೇ ಈ ಮೂರು ತಿಂಗಳಲ್ಲಿ ಸಾಮಾನ್ಯವಾಗಿ ಬೇಸಿಗೆ ಕಾಲವಾಗಿದೆ. ಈ ಭಾರಿ ಅತ್ಯಧಿಕ ಬಿಸಿಲಾಗಲಿದೆ.  ಕಳೆದ ಫೆಬ್ರವರಿಯಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಬಿಸಿಲು ಕ್ರಮೇಣ ಏರತೊಡಗಿತು. ಆದರೆ ದಕ್ಷಿಣ ಒಳನಾಡಿನಲ್ಲಿ ಅಷ್ಟಾಗಿ ಹೆಚ್ಚಾಗಿರಲಿಲ್ಲ. ಆದರೆ ಮುಂದಿನ 90 ದಿನ ಕರ್ನಾಟಕ ಅತ್ಯಧಿಕ ಬಿಸಲಿಗೆ ಸಾಕ್ಷಿಯಾಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಞಾನ ಮತ್ತು ಹವಾಮಾನ ತಜ್ಞ ಡಾ.ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಹವಾಮಾನ ಇಲಾಖೆಯ ಮಾಹಿತಿಗೆ ಪೂರಕವಾಗಿ ಈಗ ಕರಾವಳಿ ಭಾಗಗಳಲ್ಲಿ ಬೆಳಗಿನ ವೇಳೆ ಚಳಿಯ ವಾತಾವರಣ ಇದ್ದು, ಆ ಬಳಿಕ ಉಷ್ಣತೆ ಏರ ತೊಡಗುತ್ತದೆ. ಮಧ್ಯಾಹ್ನ ವಿಪರೀತವಾದ ಬಿಸಿಲು ಹಾಗೂ ಉಷ್ಣತೆ ಕಂಡುಬರುತ್ತಿದೆ. ಹೀಗಾಗಿ ಈ ಬಾರಿ ಮಳೆ ಸಾಧ್ಯತೆ ಕಡಿಮೆ ಇದ್ದು ಬಿಸಿಲಿನ ಝಳ ಹೆಚ್ಚಾಗುತ್ತಿದೆ.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror