Advertisement
MIRROR FOCUS

ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

Share

ಮೈಸೂರು ವಿಭಾಗದ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಖರೀದಿ ಸಂಕಷ್ಟಕ್ಕೆ ಇನ್ನೆರಡು ದಿನಗಳಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಮೈಸೂರು ವಿಭಾಗದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ತಂಬಾಕು ಮಂಡಳಿ, ಐಟಿಸಿ ಕಂಪನಿಗಳ ಹಿರಿಯ ಅಧಿಕಾರಿಗಳು ಹಾಗೂ ಪಶುಸಂಗೋಪನಾ ಸಚಿವ ವೆಂಕಟೇಶ್‌  ಉಪಸ್ಥಿತರಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಮೈಸೂರು, ಹಾಸನ ಸೇರಿದಂತೆ ಇತರೆ ಭಾಗಗಳಲ್ಲಿ ರೈತರು ಬೆಳೆದ ತಂಬಾಕು ಖರೀದಿಯಾಗದೆ ಗೋದಾಮುಗಳಲ್ಲಿ ಉಳಿದಿದ್ದು, ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ತಂಬಾಕು ಮಂಡಳಿ ಮತ್ತು ಐಟಿಸಿ ಕಂಪನಿಗಳಿಗೆ ತುರ್ತಾಗಿ ಖರೀದಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಸಹ ಈ ಬಗ್ಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಬೇಗನೆ ಕ್ರಮ ಕೈಗೊಳ್ಳಲಾಗುವುದು. ಖರೀದಿ ಪ್ರಕ್ರಿಯೆ ವೇಗಗೊಳ್ಳುವ ವಿಶ್ವಾಸವಿದೆ. ಇನ್ನೆರಡು ದಿನಗಳಲ್ಲಿ ಸ್ಪಷ್ಟ ಪರಿಹಾರ ಸಿಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ರೈತರ ಪರವಾಗಿ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದ್ದು, ಯಾವುದೇ ರೈತನು ನಷ್ಟಪಡುವಂತಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Union Minister H.D. Kumaraswamy held an urgent meeting in Mysuru with Tobacco Board and ITC officials regarding procurement issues faced by tobacco farmers in the Mysuru region. He assured that the issue of unsold tobacco stocks would be resolved within two days and directed authorities to expedite the purchase process.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

2 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

9 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

14 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

2 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

3 days ago