ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |

January 15, 2025
1:00 PM
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಆದರೆ ರಾಜ್ಯದಲ್ಲಿ ಇದರ ಪ್ರಭಾವದಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

16.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಜನವರಿ 16ರ ತನಕ ಮೋಡದ ವಾತಾವರಣ ಇರಲಿದ್ದು, 17 ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಒಂದೆರಡು ಕಡೆ, ಹಾಸನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 16ರ ತನಕ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 17ರಿಂದ ಒಣ ಹವೆ ಆವರಿಸುವ ಲಕ್ಷಣಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆ ಸಣ್ಣ ಪ್ರಮಾಣದ ಹನಿ ಮಳೆಯ ಸಾಧ್ಯತೆ ಇದೆ. ಈಗಿನಂತೆ ಜನವರಿ 17ರ ತನಕ ಅಲ್ಲಲ್ಲಿ ಮೋಡದ ವಾತಾವರಣದ ಲಕ್ಷಣಗಳಿದ್ದು, 18ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಜನವರಿ 16 ರ ಸುಮಾರಿಗೆ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಆದರೆ ರಾಜ್ಯದಲ್ಲಿ ಇದರ ಪ್ರಭಾವದಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror