ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843 ರೈತರ ಪೈಕಿ 39,537 ರೈತರಿಂದ ಅತಿ ಹೆಚ್ಚು ಪ್ರಮಾಣದ 6.56 ಲಕ್ಷ ಕ್ವಿಂಟಾಲ್ ತೊಗರಿಯನ್ನು ಖರೀದಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದ ತೊಗರಿಯನ್ನು ವಿಜಯಪುರ ಜಿಲ್ಲೆಯಲ್ಲಿ ಖರೀದಿಸಲಾಗಿದ್ದು, ಕಲಬುರಗಿ ದ್ವೀತಿಯ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ 10 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, 45843 ರೈತರು ನೊಂದಣಿ ಮಾಡಿಕೊಂಡಿದ್ದಾರೆ. ಪ್ರತಿ ಕ್ವಿಂಟಾಲ್ ತೊಗರಿಗೆ 7 550 ರಂತೆ ನಾಫೆಡ್ ಸಂಸ್ಥೆಯಿಂದ 22 ಸಾವಿರದ 30 ರೈತರಿಗೆ 270 ಕೋಟಿ ರೂಪಾಯಿಗಳನ್ನು ಹಾಗೂ 450 ರೂಪಾಯಿಯಂತೆ ರಾಜ್ಯ ಪ್ರೊತ್ಸಾಹ ಧನ ನೀಡಿದೆ. 10 ಕೋಟಿ.44 ಲಕ್ಷ ರೂಪಾಯಿಗಳನ್ನು 14 613 ರೈತರಿಗೆ ಡಿಬಿಟಿ ಮೂಲಕ ಜಮೆ ಮಾಡಲಾಗಿದ್ದು, ಬಾಕಿ ಉಳಿದ ರೈತರಿಗೆ ಹಂತ ಹಂತವಾಗಿ ಜಮೆ ಮಾಡಲಾಗುವದು ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…