SSLC ವಿದ್ಯಾರ್ಥಿಗಳ ಪರೀಕ್ಷೆಗೆ ಸಂಬಂಧಿಸಿದ ಗೊಂದಲ, ಸಮಸ್ಯೆ ಗಳ ಕುರಿತು ಮಾತನಾಡಿ ಬಗೆಹರಿಸಿಕೊಳ್ಳಲು ಸಹಾಯವಾಗುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಹಾಯವಾಣಿಯನ್ನು ಆರಂಭಿಸಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೇ ಪರೀಕ್ಷೆ ಸುಗಮವಾಗಿ ನಡೆಯೋದಕ್ಕಾಗಿ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1800 425 0255 ಕ್ಕೆ ಕರೆಮಾಡಿ ಮಾತನಾಡಬಹುದು. ವಿದ್ಯಾರ್ಥಿಗಳು ಪ್ರವೇಶ ಪತ್ರ, ಪರೀಕ್ಷೆ ಗೊಂದಲಗಳು ಸೇರಿದಂತೆ ಹಲವು ಪ್ರಶ್ನೆಗಳಿಗೆ ಈ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ ಗೆ ಕರೆ ಮಾಡಬಹುದು. ಈ ಸಹಾಯವಾಣಿ ಸಂಖ್ಯೆ ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಆರಂಭಗೊಂಡು, ರಾತ್ರಿ 8 ಗಂಟೆಯವರೆಗೆ ಚಾಲನೆಯಲ್ಲಿ ಇರಲಿದೆ. ಭಾನುವಾರದಂದು ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಭ್ಯವಿರಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel