Advertisement
ಸುದ್ದಿಗಳು

#PriceHike| ಗಗನಕ್ಕೇರಿದ ಟೊಮೆಟೋ ಬೆಲೆ | 2 ಟನ್ ಟೊಮೆಟೊವಿದ್ದ ವಾಹನವನ್ನೇ ಎಗರಿಸಿದ ಖದೀಮರು…! |

Share

ಟೊಮೆಟೋ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಕೊಂಚವೂ ಇಳಿಯುವ ಲಕ್ಷಣ ಗೋಚರಿಸುತ್ತಿಲ್ಲ. ಈ ಮಧ್ಯೆ ಟೊಮೇಟೋವನ್ನು ಕಳ್ಳಕಾಕರರಿಂದ ಕಾಪಾಡುವುದೇ ದೊಡ್ಡ ಸವಾಲಾಗಿದೆ. ಇತ್ತ ಜನಸಾಮಾನ್ಯರು  ಟೊಮೆಟೊ #Tomato ಖರೀದಿ ಮಾಡೋದೇ ಅಸಾಧ್ಯವಾಗಿದೆ. ಅಧಿಕ ಧಾರಣೆ ಇರುವ  ವೇಳೆ 2 ಟನ್ ಟೊಮೆಟೊ ಹೊತ್ತಿದ್ದ ಬುಲೆರೋ ವಾಹನವನ್ನೇ ಖದೀಮರು ಎಗರಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ #Bengaluru ಆರ್‌ಎಂಸಿ ಯಾರ್ಡ್‌ನಲ್ಲಿ ಈ ಘಟನೆ ನಡೆದಿದೆ. ರೈತರು ಚಿತ್ರದುರ್ಗದಿಂದ ಆರ್‌ಎಂಸಿ ಯಾರ್ಡ್‌ಗೆ ಟೊಮೆಟೊ ಲೋಡ್ ಅನ್ನು ತಂದಿದ್ದರು. ರೈತರು ಯಾವಾಗ ವಾಹನವನ್ನು ನಿಲ್ಲಿಸಿ, ಟೀ ಕುಡಿಯಲು ಹೋಗಿದ್ದರೋ ಆಗ ಬಂದ ಕಳ್ಳರು ವಾಹನ ಸಮೇತವಾಗಿ 2 ಟನ್ ಟೊಮೆಟೊ ಹೊತ್ತೊಯ್ದಿದ್ದಾರೆ.

250 ಕ್ಕೂ ಹೆಚ್ಚು ಟೊಮೆಟೊ ಟ್ರೇ ಇದ್ದ ಬುಲೆರೋ ವಾಹನವನ್ನು ಕಾರಿನಲ್ಲಿ ಬಂದಿದ್ದ ಮೂವರು ಹೈಜಾಕ್ ಮಾಡಿದ್ದಾರೆ. ಟೊಮೆಟೊ ತುಂಬಿದ್ದ ಗಾಡಿ ಫಾಲೋ ಮಾಡಿ ಬಂದ ಆರೋಪಿಗಳು, ಆರ್‌ಎಂಸಿ ಯಾರ್ಡ್ ಬಳಿ ಅಡ್ಡ ಹಾಕಿ ರೈತನಿಗೆ ಅವಾಜ್ ಹಾಕಿದ್ದಾರೆ. ಗಾಡಿ ಟಚ್ ಆಗಿದೆ ಎಂದು ನಾಟಕ ಮಾಡಿ ಡ್ರೈವರ್‌ಗೆ ಥಳಿಸಿದ್ದು, ನಂತರ ರೈತನ ಮೇಲೂ ಹಲ್ಲೆ ಮಾಡಿ ಹಣ ಕೊಡು ಎಂದು ಅವಾಜ್ ಹಾಕಿದ್ದಾರೆ.

ಹಣ ಇಲ್ಲ ಎಂದಾಗ ಮೊಬೈಲ್‌ನಲ್ಲಿದ್ದ ಹಣ ಟ್ರಾನ್ಸ್ಫರ್ ಮಾಡಿಕೊಂಡು ಟೊಮೆಟೊ ಗಾಡಿಯಲ್ಲಿ ರೈತನನ್ನು ಕೂರಿಸಿಕೊಂಡು ಹೈಜಾಕ್ ಮಾಡಿದ್ದಾರೆ. ಚಿಕ್ಕಜಾಲ ಬಳಿ ಡ್ರೈವರ್‌ನ ಬಿಟ್ಟು ಟೊಮೆಟೊ ತುಂಬಿದ್ದ ವಾಹನ ಸಮೇತ ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನೆ ಸಂಬಂಧ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

7 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

12 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

12 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

13 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

13 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

23 hours ago